ಕಡಬ: ಕುದ್ಮಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿಗೊಂಡಿರುವ ಕುಶಾಲಪ್ಪ ಬಿ. ಅವರಿಗೆ ಸನ್ಮಾನ ಹಾಗೂ ವಿದಾಯ ಸಮಾರಂಭ ಜೂ.21 ಶನಿವಾರ ಬೆಳಿಗ್ಗೆ 9.30 ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕುಶಾಲಪ್ಪ ಬಿ. ಅವರು ಕೊಡುಗೆಯಾಗಿ ನೀಡಿರುವ ನೂತನ ಧ್ವಜ ಕಟ್ಟೆಯ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.
ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಎಸ್ ಡಿಎಂಸಿ ಅಧ್ಯಕ್ಷ ದೇವರಾಜ್ ನೂಜಿ ಹಾಗೂ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಲತಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























