ಜೂ.27 : ನಾಡಪ್ರಭು ಕೆಂಪೇಗೌಡ ಜಯಂತಿ | ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಾಡಪ್ರಭು ಕೆಂಪೇಗೌಡರ ಕುರಿತು ವಿವಿಧ ಸ್ಪರ್ಧೆ

ಮಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಅರ್ಧಪೂರ್ಣವಾಗಿ ಆಚರಿಸಲು ಸೂಚನೆ ನೀಡಲಾಗಿದ್ದು, ಅದರಂತೆ ದ.ಕ.ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ನಾಡಪ್ರಭು ಕೆಂಪೇಗೌಡರ ಕುರಿತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲು ಸೂಚಿಸಲಾಗಿದೆ.

ಆದ್ದರಿಂದ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಲ್ಲಿ ರಸಪ್ರಶ್ನೆ, ಪ್ರಬಂಧ, ಚಿತ್ರಕಲೆ, ಅಶು ಭಾಷಣ, ಕವನ ವಾಚನ, ಗಾಯನ ಸ್ಪರ್ಧೆಗಳಲ್ಲಿ ಯಾವುದಾದರೂ ಒಂದು ಸ್ಪರ್ಧೆಯನ್ನು ತಮ್ಮ ಹಂತದಲ್ಲಿ ಏರ್ಪಡಿಸಿ ಜೂ. 25  ರ ಒಳಗೆ ಸಹಾಯ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ (dkc.mangaluru@gmail.com) ಇಲ್ಲಿಗೆ ಪ್ರಥಮ. ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದ ವಿಜೇತರನ್ನು ಪಟ್ಟಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ವಿಜೇತರಿಗೆ ಜೂ.27 ರಂದು. ಪೂರ್ವಾಹ್ನ 10.30 ಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಜರಗುವ ನಾಡಪ್ರಭು ಕೆಂಪೇಗೌಡ ಜಯಂತಿ ದಿನದಂದು ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top