ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ ಜೂ.22 ಭಾನುವಾರ ಕುಂಬ್ರ ಕಿರಣ್ ಸಂಕೀರ್ಣದಲ್ಲಿ ನಡೆಯಲಿದೆ.
ದಶಮಾನೋತ್ಸವದ ಅಂಗವಾಗಿ ಬೆಳಿಗ್ಗೆ 7 ಗಂಟೆಗೆ ಗಣಹೋಮ ಮತ್ತು ಲಕ್ಷ್ಮೀಪೂಜೆ ನಡೆಯಲಿದೆ.
ಬೆಳಿಗ್ಗೆ 9.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ.ಜಯರಾಮ ರೈ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಒಳಮೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕುಂಬ್ರ ವರ್ತಕ ಸಂಘದ ಅಧ್ಯಕ್ಷ ಜ.ಪಿ.ಕೆ.ಮಹಮ್ಮದ್, ಪುರೋಹಿತ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
























