ದ.ಕ.ಜಿಲ್ಲೆಯ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತುಳು ಭಾಷೆ ಬಳಕೆ ಮಾಡುವಂತಿಲ್ಲ | ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಸರಕಾರದಿಂದ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ನಡೆಯುವ  ಸಾಮಾನ್ಯ ಸಭೆಗಳಲ್ಲಿ ಚರ್ಚೆಗೆ ತುಳು ಭಾಷೆ ಬಳಸದಂತೆ ಸೂಚನೆ ನೀಡಲಾಗಿದ್ದು, ಪರಿಣಾಮ ಇದೀಗ ತುಳು ಭಾಷಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಪಂ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತುಳು ಭಾಷೆ ಬಳಕೆ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಉಲ್ಲೇಖ (1)ರಂತೆ ಮನವಿ ಸಲ್ಲಿಸಿರುತ್ತಾರೆ. ಸದ್ದಿ_ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ.

ವಿಧಾನಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ ಮಾಡಬಹುದಾದರೆ ಗ್ರಾಮ ಪಂಚಾಯತಿಗಳಲ್ಲಿ ತುಳು ಮಾತನಾಡಬಾರದೆಂದರೆ ಇದರ ಹಿಂದಿರುವ ಉದ್ದೇಶ ಏನು ಎಂಬುದು ಅರ್ಥವಾಗುತ್ತಿಲ್ಲ. ಈ ಕುರಿತು ಹೇಳಿಕೆ ನೀಡಿರುವ ಕೋಟ ಶ್ರೀನಿವಾಸ ಪೂಜಾರಿ, ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸಬೇಕೇ ಹೊರತು ಇದೇ ಭಾಷೆ ಮಾತಾಡಬೇಕು ಎಂದು ಹೇರಿಕೆ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top