ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದ ಘಟನೆ ಅಡ್ಯನಡ್ಕ ಬಳಿ ನಡೆದಿದೆ.
ಘಟನೆ ಪರಿಣಾಮ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿ ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಾದಚಾರಿಗೆ ಡಿಕ್ಕಿ ಹೊಡೆದ ಕಾರು ಬದಿಯ ಧರೆಗೆ ಅಪ್ಪಳಿಸಿ ನಿಂತಿದೆ ಎನ್ನಲಾಗಿದೆ.
























