ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು.

ಹೇಮ ಚಂದ್ರಹಾಸ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಮಾತನಾಡಿ, ಯೋಗವನ್ನು ಪ್ರತಿದಿನ ಅಭ್ಯಾಸ ಮಾಡಿದರೆ ದೇಹ ಮತ್ತು ಮನಸ್ಸು ಒತ್ತಡಮುಕ್ತವಾಗುತ್ತದೆ. ಅನೇಕ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಗದ ಮೂಲಕ ದೇಹದ ಆರೋಗ್ಯ ಹಾಗೂ ಮನಸ್ಸಿನ ಸಮತೋಲನ ವೃದ್ಧಿ ಆಗುತ್ತದೆ. ಯೋಗವೇ ಸೌಂದರ್ಯ ವರ್ಧನೆಗೂ ಒಂದು ಪಥ ಎಂದು ಹೇಳಿದರು.
ಆಡಳಿತಾಧಿಕಾರಿ ಅರ್ಪಿತ್ ಎ., ಉಪಪ್ರಾಂಶುಪಾಲ ರಕ್ಷಣ್ ಎ., ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಗಂಗಾರತ್ನ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಕುಮಾರಿ ಮೇಘಶ್ರೀ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾದ ಹೇಮ ಚಂದ್ರಹಾಸ ಅಗಲಿ ಮತ್ತು ರಾಷ್ಟ್ರೀಯ ಸೇವಾಯೋಜನೆ ಸ್ವಯಂ ಸೇವಕ ಶ್ರೇಯಸ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಯಶಸ್ವಿಯಾಗಿ ನಡೆಸಿಕೊಟ್ಟರು. ಸ್ವಯಂ ಸೇವಕಿಯರಾದ ಶ್ರೀಯಾ, ಸೃಷ್ಟಿ ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿ ವರ್ಷಿಣಿ ಎಸ್. ನಿರೂಪಿಸಿದರು.
























