ಮಂಗಳೂರು: ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ 50 ವರ್ಷದ ಕರಾಳ ಇತಿಹಾಸ ಮಂಗಳೂರು ಕದ್ರಿ ದೇವಸ್ಥಾನದ ಗೋರಕ್ಷಕನಾಥ ಸಭಾಭವನದಲ್ಲಿ ಜು.25 (ನಾಳೆ) ನಡೆಯಲಿದೆ.
ಬೆಳಿಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























