ತುರ್ತು ಪರಿಸ್ಥಿತಿಯ ಕರಾಳತೆಯನ್ನು ಅರಿವಾಗಿಸಲು ಸಂವಿಧಾನ್ ಹತ್ಯಾ ದಿವಸ್ ಆಚರಣೆ : ಅಮಿತ್ ಶಾ

ನವದೆಹಲಿ: ದೇಶದಲ್ಲಿ ಹೇರಲಾಗಿದ್ದ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಜನರಿಗೆ ಅರಿವಾಗಿಸಲು ಪ್ರಧಾನಿ ಮೋದಿ ಸರ್ಕಾರ ‘ಸಂವಿಧಾನ ಹತ್ಯಾ ದಿನ’ವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇಂದಿಗೆ ದೇಶದಲ್ಲಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿ 50 ವರ್ಷ ಕಳೆದಿದೆ. ಆಳುವವರು ಸರಿವಾಧಿಕಾರಿಗಳಾದರೆ ಅವರನ್ನು ಅಧಿಕಾರದಿಂದ ಉರುಳಿಸುವ ಶಕ್ತಿಯನ್ನು ಜನರು ಹೊಂದಿದ್ದಾರೆ. ಅದನ್ನು ಈ ದಿನ ನೆನಪು ಮಾಡಿಸುತ್ತದೆ ಎಂದು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು. ನ್ಯಾಯಾಂಗದ ಕೈಗಳನ್ನು ಬಂಧಿಸಲಾಯಿತು. ಈ ಸಂದರ್ಭದಲ್ಲಿ ಜನರು ಇಂದಿರಾ ಗಾಂಧಿ ಅವರು ಅಧಿಕಾರ ತ್ಯಜಿಸಬೇಕು ಎಂದು ಧ್ವನಿ ಎತ್ತಿದರು. ಸರ್ವಾಧಿಕಾರಿ ಕಾಂಗ್ರೆಸ್ ಅನ್ನು ಬುಡಸಮೇತ ಕಿತ್ತು ಹಾಕಿದರು. ಈ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ವೀರರಿಗೆ ತಾನು ನಮನ ಸಲ್ಲಿಸುವುದಾಗಿ ಹೇಳಿದ್ದಾರೆ





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top