ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ಮಂಗಳವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಜಿರೆ ಪೇಟೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಗ್ರಾಮಪಂಚಾಯಿತಿ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 45 ರಿಂದ 50ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ ABGTK ಎಂಬ ಹಚ್ಚೆ ಬರೆಯಲಾಗಿದೆ. ಮೃತದೇಹವನ್ನು ವೆನಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಮೃತರ ವಾರಿಸುದಾರರು ಯಾರಾದರೂ ಇದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
























