ಶಿಶಿಲ: ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಶಿಶಿಲೇಶ್ವರ ದೇವಸ್ಥಾನ ಜಲಾವೃತವಾಗಿದ್ದು, ಗರ್ಭಗುಡಿಗೆ ನೀರು ನುಗ್ಗಿದೆ.

ಶಿಶಿಲೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದ್ದು, ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಉಂಟಾದ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿ, ಪವಿತ್ರ ಗರ್ಭಗುಡಿಗೂ ಪ್ರವೇಶಿಸಿದೆ ಎನ್ನಲಾಗಿದೆ.
ದೇವಳದ ಪಕ್ಕದಲ್ಲಿರುವ ಅಂಗಡಿಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ದೇವಾಲಯದ ಸಂಪರ್ಕಮಾರ್ಗವಾಗಿರುವ ಕಿಂಡಿ ಆಣೆಕಟ್ಟಿನು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಸದ್ಯಕ್ಕೆ ತೂಗುಸೇತುವೆಯವರೆಗೂ ನೀರು ಹರಿಯುತ್ತಿದೆ. ಪ್ರವಾಹದ ವೇಗ ಹಾಗೂ ಮಟ್ಟವನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಗ್ರಾ.ಪಂ ಹಾಗೂ ಸ್ಥಳೀಯ ಸಂಘಟನೆಗಳು ಭದ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಎಂದು ಗ್ರಾ.ಪಂ ಅಧ್ಯಕ್ಷರು ಸುಧೀನ್ ಡಿ ತಿಳಿಸಿದ್ದಾರೆ.
























