ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ

ಹಲವು ತಾಸು ವಾಹನ ಸಂಚಾರ ವ್ಯತ್ಯಯ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಭಾರಿ ಪ್ರಮಾಣದಲ್ಲಿ ಕಲ್ಲು-ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸಂಜೆ ವೇಳೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಜರಿದಿದ್ದು ಮಣ್ಣು ಮರಗಳ ಸಮೇತ ರಸ್ತೆಗೆ ಬಿದ್ದಿದೆ. ಇದರಿಂದಾಗಿ ರಸ್ತೆ ಸಂಪೂರ್ಣ ಮುಚ್ಚಿಹೋಗಿತ್ತು.





















































 
 

ಮಣ್ಣು ರಸ್ತೆಗೆ ಬಿದ್ದಿರುವುದರಿಂದ ಬಸ್ಸು ಹಾಗೂ ಇನ್ನಿತರ ದೊಡ್ಡ ವಾಹನಗಳ ಸಂಚಾರ ಸಂಜೆ ವೇಳೆ ಸ್ಥಗಿತಗೊಂಡಿತ್ತು. ಸಣ್ಣ ವಾಹನಗಳಿಗೆ ಕಿರಿದಾದ ಜಾಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಂದ ಮಣ್ಣು ತೆರವು ಕಾರ್ಯ ನಡೆಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top