ಜೂ.27 : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಜು.27 ಶುಕ್ರವಾರ ಬೆಳಗ್ಗೆ 10.30 ಕ್ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ನಡೆಯಲಿದೆ.


ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್‍ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್‍ ಸದಸ್ಯ ಕಿಶೋರ್‍ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಲ ರಾಮಚಂದ್ರ, ಪೊಲೀಸ್ ಉಪಾಧೀಕ್ಷಕ ಅರುಣ್‍ ನಾಗೇ ಗೌಡ, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಪಾಲ್ಗೊಳ್ಳಲಿದ್ದು, ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್‍.ನಿಡ್ಪಳ್ಳಿ ಸಂಸ್ಮರಣಾ ಉಪನ್ಯಾಸ ನೀಡುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top