ಛತ್ತೀಸ್‍ಘಡ್: ನಾರಾಯಣಪುರದಲ್ಲಿ ನಡೆದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲ್ ಮಹಿಳೆಯರು ಮೃತಪಟ್ಟಿದ್ದಾಗಿ ಮೂಲಗಳು ತಿಳಿಸಿವೆ.
ಈ ಕಾರ್ಯಾಚರಣೆ ಅಭುಜ್‌ಮಾದ್ ಪ್ರದೇಶದ ಕೊಹ್ಕಮೆಟಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಕ್ಸಲರು ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆ ಈ ಕಾರ್ಯಾಚರಣೆಯನ್ನು ಜಂಟಿಯಾಗಿ ನಡೆಸಿರುವುದಾಗಿದೆ. ನಾರಾಯಣಪುರ ಮತ್ತು ಕೊಂಡಗಾಂವ್‌ಗಳಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಜಿಲ್ಲೆಗಳ ಡಿಆರ್‌ಜಿ ಸಿಬ್ಬಂದಿ ಸಹ ಭಾಗಿಗಳಾಗಿದ್ದರು.
ಈ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ಮಾವೋವಾದಿಗಳ ಶವ ದೊರೆತಿದೆ. ಜೊತೆಗೆ 315 ಬೋರ್ ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದೆ.
























