ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು: ದತ್ತಾತ್ರೇಯ ಹೊಸಬಾಳೆ

ನವದೆಹಲಿ: ಸಮಾಜವಾದಿ ಮತ್ತು ಜಾತ್ಯಾತೀತ ಪದಗಳನ್ನು ನಮ್ಮ ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕಬೇಕು ಎಂದು RSS ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಆಗ್ರಹಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿರುವ ಡಾ| ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ದೇಶದ ಕ್ಷಮೆ ಯಾಚಿಸಬೇಕು. ತುರ್ತು ಪರಿಸ್ಥಿತಿ ಹೇರಿದವರೇ ಇಂದು ದೇಶದಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದು ಓಡಾಡುತ್ತಿದ್ದಾರೆ. ಆದರೆ ಈ ವರೆಗೂ ಅವರು ದೇಶದ ಜನರಲ್ಲಿ ಕ್ಷಮೆ ಕೇಳಿಲ್ಲ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಅಂಬೇಡ್ಕರ್ ಅವರ ಹೆಸರಿನ ಕಟ್ಟಡದಲ್ಲಿ ನಿಂತು ನಾನು ಹೇಳುತ್ತೇನೆ, ಅವರು ರಚಿಸಿದ ಸಂವಿಧಾನದ ಪೀಠಿಕೆಗಳಲ್ಲಿ ಈ ಪದಗಳು ಇರಲಿಲ್ಲ ಎಂದು ತಿಳಿಸಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top