ಕಾಂಟಾ ಲಗಾ…ಖ್ಯಾತಿಯ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ

ಪುನೀತ್‌ ರಾಜ್‌ಕುಮಾರ್‌ ಚಿತ್ರಗಳಲ್ಲೂ ನಟಿಸಿದ್ದ ನಟಿ

ಮುಂಬಯಿ: ಕಾಂಟಾ ಲಗಾ… ಹಾಡಿಗೆ ಮಾದಕವಾಗಿ ಕುಣಿದು ಆಲ್ಬಂ ಸಾಂಗ್‌ ಜಮಾನದಲ್ಲಿ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿನಲ್ಲೂ ಮಸ್ತ್‌ ಆಗಿ ಕುಣಿದಿದ್ದರು. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ ಹೊಂದಿದ್ದರು. ಪ್ರಸ್ತುತ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಶೆಫಾಲಿ ಜನಿಸಿದ್ದು 1982ರ ಡಿಸೆಂಬರ್ 15ರಂದು. ಅವರು ಮುಂಬಯಿನಲ್ಲಿ ಹುಟ್ಟಿ, ಬೆಳೆದವರು. 2004ರಲ್ಲಿ ಅವರು ಹರ್ಮೀತ್ ಸಿಂಗ್​ ಎಂಬವರನ್ನು ವಿವಾಹ ಆದರು. ಈ ಸಂಬಂಧ 2009ರವರೆಗೆ ಇತ್ತು. ಆ ಬಳಿಕ ಇವರು ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ವಿವಾಹ ಆದರು. ಎರಡನೇ ಪತಿಯ ಜೊತೆ ಇನ್ನೂ ಅವರು ಸಂಸಾರ ನಡೆಸುತ್ತಿದ್ದರು.





















































 
 

2004ರ ‘ಕಾಂಟಾ ಲಗಾ…’ ಹಾಡಿನಲ್ಲಿ ಶೆಫಾಲಿ ಭರ್ಜರಿ ಡ್ಯಾನ್ಸ್ ಮಾಡಿದ್ದರು. ಈ ಆಲ್ಬಂ ಹಾಡು ಆ ದಿನಗಳಲ್ಲಿ ಹುಚ್ಚೆಬ್ಬಿಸಿತ್ತು. 2011ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಅವರು ‘ಪಂಕಜಾ..’ ಹಾಡಿಗೆ ಮಸ್ತ್ ಆಗಿ ಸ್ಟೆಪ್ ಹಾಕಿದ್ದರು. 2019ರಲ್ಲಿ ಆರಂಭ ಆದ ‘ಬಿಗ್ ಬಾಸ್ ಸೀಸನ್ 13’ರಲ್ಲಿ ಪಂಕಜಾ ಸ್ಪರ್ಧಿಸಿದರು. ಅವರ ನಿಧನ ವಾರ್ತೆ ಅನೇಕರಿಗೆ ದುಃಖ ತಂದಿದೆ. ಶಾಕಿಂಗ್ ವಿಚಾರ ಎಂದರೆ ಅವರ ಜೊತೆ ನಟಿಸಿದ ಪುನೀತ್ ಹಾಗೂ ಅವರ ಜೊತೆ ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿ ಗೆದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದಲೇ ನಿಧನ ಹೊಂದಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top