ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 300 ಹಾಸಿಗೆಗಳನ್ನು ಒಳಗೊಂಡ ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಅಪಘಾತಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮತ್ತು ಉತ್ತಮ ಆರೈಕೆಯ ಮೂಲಕ ಜೀವ ಉಳಿಸುವುದಕ್ಕೆ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.
ಸುಮಾರು 498 ಕೋಟಿ ರೂ. ವೆಚ್ಚದಲ್ಲಿ ಕ್ಯಾಲಸನಹಳ್ಳಿಯಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಮತ್ತು 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಹಣಕಾಸು ಸಚಿವಾಲಯದಿಂದ ಈ ಅನುಮೋದನೆ ದೊರೆತಿರುವುದಾಗಿದೆ.
























