ನೆಲ್ಯಾಡಿ: ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರೆಖ್ಯಾ ಗ್ರಾಮದ ಪರ್ಕಳ ಎಂಬಲ್ಲಿ ಶನಿವಾರ ನಡೆದಿದೆ.
ಉಡೈರೆ ನಿವಾಸಿ ಕೃಷ್ಣಪ್ಪ ಕುಲಾಲ್ (49) ವಿದ್ಯುತ್ ಶಾಕ್ ನಿಂದ ಮೃತಪಟ್ಟವರು.
ತೋಟದಲ್ಲಿ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸುತ್ತಿರುವ ಸಂದರ್ಭ ದೋಟಿಗೆ ಎಚ್‌ಟಿಐ ಲೈನ್‌ಗೆ ಸ್ಪರ್ಶಿಸಿ ತಕ್ಷಣವೇ ವಿದ್ಯುತ್ ಶಾಕ್ ಆಗಿದ್ದಾರೆ. ಅವರನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ದುರದೃಷ್ಟವಶಾತ್ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.. ಬಳಿಕ ಮೃತ ದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
























