ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಶಮಿತಾ (15) ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಸತಿ ಶಾಲೆ ಹಾಸ್ಟೆಲ್ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ

