ಸುಳ್ಯ: ಕೆಎಸ್ ಆರ್ ಟಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡವಾಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಇಳಿದು ಬರೆಗೆ ವಾಲಿ ನಿಂತಿದೆ.
ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
























