ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಕೃಷ್ಣ ನಾಪತ್ತೆಯಾಗಿದ್ದಾನೆ. ಮಗು ಜನನವಾದ ಬಳಿಕ ತನಿಖೆ ಹೊಸ ದಾರಿ ಹಿಡಿದಿದ್ದು, ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.

ನಾಪತ್ತೆಯಾದ ಆರೋಪಿ ಕೃಷ್ಣನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಗುವಿನ ಡಿಎನ್‌ಎ ಪರೀಕ್ಷೆಯಿಂದ ಮಗುವಿನ ತಂದೆ ಯಾರು ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ. ಇದು ಕೇಸಿಗೆ ಇನ್ನಷ್ಟು ಬಲ ನೀಡುವ ಪುರಾವೆಯಾಗುತ್ತದೆ.





















































 
 

ವಿದ್ಯಾರ್ಥಿನಿ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಈಗಾಗಲೇ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಶ್ರೀಕೃಷ್ಣ ತಲೆ ಮರೆಸಿಕೊಂಡಿದ್ದಾನೆ.

ಕೃಷ್ಣ ರಾವ್ ಮತ್ತು ಯುವತಿ ಪ್ರೌಢಶಾಲೆಯಲ್ಲಿ ಸಹಪಾಠಿಗಳಾಗಿದ್ದರು. ಶಾಲಾ ದಿನಗಳ ನಂತರವೂ ಇಬ್ಬರ ನಡುವೆ ಸಂಬಂಧ ಮುಂದುವರಿದಿತ್ತು. ಪ್ರಸ್ತುತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ ವ್ಯಾಸಂಗ ಮಾಡುತ್ತಿರುವ ಯುವತಿ 2024ರ ಅಕ್ಟೋಬರ್ 11ರಂದು ಕೃಷ್ಣ ತನ್ನ ಮನೆಗೆ ಯಾರೂ ಇಲ್ಲದ ಸಮಯದಲ್ಲಿ ಕರೆದುಕೊಂಡು ಹೋಗಿ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರ 2025ರ ಜನವರಿಯಲ್ಲಿ ಆತ ಮತ್ತೆ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ನಾನು ಗರ್ಭಿಣಿ ಎಂದು ಅರಿತುಕೊಂಡು ಕೃಷ್ಣ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಪುತ್ತೂರಿನ ನಿವಾಸಿಯಾಗಿರುವ ವಿದ್ಯಾರ್ಥಿನಿ ತಾನು ಮತ್ತು ಕೃಷ್ಣ ಹಲವಾರು ವರ್ಷಗಳಿಂದ ಸಂಬಂಧದಲ್ಲಿದ್ದೆವು. ಕೃಷ್ಣ ತನ್ನ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು, ಆತನ ಮನೆಯಲ್ಲಿ ಅನೇಕ ಬಾರಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾಳೆ. ಗರ್ಭಿಣಿಯಾದ ವಿಷಯ ತಿಳಿದ ನಂತರ, ಯುವತಿ ತನ್ನ ಹೆತ್ತವರಿಗೆ ತಿಳಿಸಿದಳು. ನಂತರ ಅವರು ಕೃಷ್ಣನ ಕುಟುಂಬವನ್ನು ಸಂಪರ್ಕಿಸಿದರು. ಆರಂಭದಲ್ಲಿ ಕುಟುಂಬದವರು ಮದುವೆಗೆ ಒಪ್ಪಿಕೊಂಡರೂ, ಕೊನೆಗೆ ಕೃಷ್ಣ ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top