ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತ ತರಗತಿ ಉದ್ಘಾಟನೆ

ಪುತ್ತೂರು: ಸಂಸ್ಕೃತ ಮತ್ತು ಸಂಸ್ಕೃತಿ ಒಂದಕ್ಕೊಂದು ಪೂರಕವಾಗಿದೆ. ಸಂಸ್ಕೃತವು ಎಲ್ಲಾ ಭಾಷೆಗಳಿಗೂ ಮೂಲವಾಗಿದ್ದು ಅತ್ಯಂತ ಸರಳ ಹಾಗೂ ಸುಂದರ ಭಾಷೆಯಾಗಿದೆ. ಇದನ್ನು ಕೂಡ ಕಲಿಯುವ ಅವಶ್ಯಕತೆ ಇಂದಿನ ಕಾಲದಲ್ಲಿ ಅನಿವಾರ್ಯ ಎಂದು ಎವಿಜಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಹೇಳಿದರು.

ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಕೃತ ಭಾಷೆಯ ತರಗತಿಯನ್ನು ಉದ್ಘಾಟಿಸಿ ಅವರು ಮಾತಾಡಿದರು.

ಸಂಸ್ಕೃತ ಶಿಕ್ಷಕ ಕುಶಾಲ ನೇರಳಕಟ್ಟೆ, ಶಾಲಾ ಆಡಳಿತ ಸಮಿತಿ ಕಾರ್ಯದರ್ಶಿ ಗುಡ್ಡಪ್ಪಗೌಡ ಬಲ್ಯ ಸಂದರ್ಭೋಚಿತವಾಗಿ ಮಾತನಾಡಿದರು. ಆಡಳಿತ ಮಂಡಳಿಯ ಸಂಚಾಲಕ ಎ ವಿ ನಾರಾಯಣ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಮಾಧವ ಗೌಡ ಪೆರಿಯತ್ತೋಡಿ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಅಮರ್ ನಾಥ್ ಪಟ್ಟೆ ಸ್ವಾಗತಿಸಿ, ಶಿಕ್ಷಕಿ ರಾಧ ವಂದಿಸಿದರು. ಶಿಕ್ಷಕಿ ಸವಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top