ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ

ಗ್ರಾಹಕರಿಗೆ ದೊಡ್ಡ ರಿಲೀಫ್‌ ನೀಡಿದ ತೈಲ ಕಂಪನಿಗಳು

ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 58.50 ರೂ.ಗಳಷ್ಟು ಕಡಿಮೆ ಮಾಡಿ ಗ್ರಾಹಕರಿಗೆ ಶುಭ ಸುದ್ದಿ ನೀಡಿವೆ. ಗೃಹಬಳಕೆಯ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ಕಡಿಮೆಯಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಬಿಡುಗಡೆ ಮಾಡಿದ ಹೊಸ ದರ ಪಟ್ಟಿಯ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,665 ರೂ. ಆಗಿದೆ. ಜೂನ್‌ನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1723.50 ರೂ. ಆಗಿತ್ತು. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1826 ರೂ.ನಿಂದ 1769 ರೂಪಾಯಿಗೆ ಇಳಿಕೆಯಾಗಿದೆ. ಮುಂಬೈನಲ್ಲಿ 1674.50 ರೂ.ಗಳ ಬದಲಿಗೆ 1616 ರೂ ಮತ್ತು ಚೆನ್ನೈನಲ್ಲಿ 1823.50 ರೂ.ಗಳ ಬದಲಿಗೆ 1881 ರೂ.ಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಸಿಗಲಿದೆ.





















































 
 

ರಾಜಧಾನಿ ಬೆಂಗಳೂರಿನಲ್ಲಿಯೂ 19 ಕೆಜಿ ಸಿಲಿಂಡರ ಬೆಲೆಯಲ್ಲಿ 58.50 ರು.ಗಳಷ್ಟು ಕಡಿಮೆಯಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ವಾಣಿಜ್ಯ ಸಿಲಿಂಡರ್ ಅಗ್ಗವಾಗುತ್ತಿರುವುದರಿಂದ, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವ್ಯಾಪಾರಿಗಳಿಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.

ಕಳೆದ ಜೂನ್, ಮೇ, ಏಪ್ರಿಲ್ ತಿಂಗಳಲ್ಲೂ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿತ್ತು. ಜೂನ್‌ನಲ್ಲಿ 24 ರೂಪಾಯಿ, ಮೇ ತಿಂಗಳಲ್ಲಿ 14.50 ರೂಪಾಯಿ ಮತ್ತು ಏಪ್ರಿಲ್‌ನಲ್ಲಿ 41 ರೂ.ಗಳಷ್ಟು ಬೆಲೆ ಕಡಿಮೆಯಾಗಿತ್ತು. ಇದೀಗ ಜುಲೈನಲ್ಲಿಯೂ 58.50 ರೂ. ಕಡಿಮೆಯಾಗಿದೆ. ಫೆಬ್ರವರರಿಯಲ್ಲಿ 7 ರೂ. ಇಳಿಕೆಯಾಗಿದ್ದರೆ, ಮಾರ್ಚ್‌ನಲ್ಲಿ 6 ರೂಪಾಯಿ ಏರಿಕೆಯಾಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top