ಬೆಳಗಾವಿ: ತಮ್ಮ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಕ್ಕಿಲ್ಲ ಎಂಬ ಕಾರಣಕ್ಕೆ ಪ್ರೇಮಿಗಳಿಬ್ಬರು ಅಟೋದಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ ಘಟನೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಾಘವೇಂದ್ರ ಜಾದವ(28), ರಂಜಿತಾ ಚೋಬರಿ(26) ಎಂದು ತಿಳಿದು ಬಂದಿದೆ.
ಇವರಿಬ್ಬರೂ ಹಲವು ವರ್ಷಗಳಿಂದ ಪ್ರೇಮಿಸುತ್ತಿದ್ದರು. ಇವರಿಬ್ಬರ ಮದುವೆಗೆ ಮನೆಯವರ ಒಪ್ಪಿಗೆ ಇರಲಿಲ್ಲ. ರಂಜಿತಾಗೆ ಕೆಲ ದಿನಗಳ ಹಿಂದಷ್ಟೇ ವಿವಾಹ ನಿಶ್ಚಯವಾಗಿತ್ತು. ಇದರಿಂದ ನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿರ್ಜನ ಪ್ರದೇಶದಲ್ಲಿ ಅಟೋಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ಗೋಕಾಕ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
























