ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಕಡಬ ಹೊಸಮಠದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.

ಸಂಘದ ಮಾತೃ ಸಮಿತಿ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಈ ವರ್ಷ ನಡೆದ ಕಾರ್ಯಕ್ರಮಗಳ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚಣೆಯ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.





















































 
 

ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಡಾ. ಶಿವಕುಮಾ‌ರ್ ಹೊಸೊಳಿಕೆ, ಜನಾರ್ಧನ ಗೌಡ ಪಣೆಮಜಲು, ಸಂಘದ ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಬಾಲಕೃಷ್ಣ ಗೌಡ ಕೋಲ್ಪೆ, ಆಶಾತಿಮ್ಮಪ್ಪ ಗೌಡ ಕುಂಡಡ್ಕ, ದಯಾನಂದ ಗೌಡ ಅಲಡ್ಯ, ಶಿವರಾಮ ಗೌಡ ಏನೆಕಲ್ಲು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಸಂಘದ ಸಲಹಾ ಸಮಿತಿ ಸದಸ್ಯರಾದ ದೇವಣ್ಣ ಗೌಡ ನೆಲ್ವ, ಕೃಷ್ಣಪ್ಪ ಗೌಡ ಕೆಂಜಾಳ, ದಾಮೋದರ ಗೌಡ ಕಕೈ, ಸ್ಪಂದನಾ ಸಮುದಾಯ ಸಹಕಾರ ಸಂಘದ ಅಧ್ಯಕ್ಷ ಕೇಶವ ಗೌಡ ಅಮೈ, ತಾಲೂಕು ಯುವ ಘಟಕದ ಅಧ್ಯಕ್ಷ ಪೂರ್ಣೇಶ್ ಗೌಡ ಬಲ್ಯ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವೀಣಾ ರಮೇಶ್ ಕೊಲ್ಲೆಸಾಗು ಉಪಸ್ಥಿತರಿದ್ದರು. ಸಂಘದ ಸ್ಥಾಪಕ ಸದಸ್ಯರು, ತಾಲೂಕು ಸಮಿತಿಯ ಪದಾಧಿಕಾರಿಗಳು, ಗ್ರಾಮ ವಲಯ ಸಮಿತಿಯ ಪದಾಧಿಕಾರಿಗಳು, ಮತ್ತು ಊರ ಗೌಡರುಗಳು ಪಾಲ್ಗೊಂಡಿದ್ದರು.

ಸಂಘದ ವ್ಯವಸ್ಥಾಪಕ ಅಶೋಕ್ ಶೇಡಿ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಮಾತೃ ಸಮಿತಿಯ ಉಪಾಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಶಾಂತ್ ಪಂಜೋಡಿ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top