ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ

ಫಾರ್ಮಾ ಕಂಪನಿಯ ರಿಯಾಕ್ಟರ್‌ ಸ್ಫೋಟಿಸಿ ಭೀಕರ ದುರಂತ

ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ.

ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ನಿನ್ನೆ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದ ನಿಖರ ಕಾರಣ ಸಮಗ್ರ ಪರಿಶೀಲನೆಯ ಬಳಿಕ ತಿಳಿಯಲಿದೆ ಎಂದು ತಾಂತ್ರಿಕ ತಜ್ಞರು ತಿಳಿಸಿದ್ದಾರೆ.





















































 
 

ತೆಲಂಗಾಣ ರಾಸಾಯನಿಕ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಕನಿಷ್ಠ ಎಂಟು ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡ ಸುಮಾರು ಹನ್ನೆರಡು ಜನರಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿತ್ತು. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು. ಸತ್ತವರಲ್ಲಿ ಕೆಲವರ ಮೃತದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top