ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ನನಗೂ ಇದೆ: ಡಿ.ಕೆ. ಸುರೇಶ್

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದ ಹಾಗೆ ಅವರ ಸಹೋದರ ಡಿ.ಕೆ. ಸುರೇಶ್ ಅವರು ತಮ್ಮ ಅನಿಸಿಕೆ ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ನನಗೂ ಇದೆ. ಈ ಭರವಸೆ ಈಗಲೂ ಇದೆ. ಮುಂದೆಯೂ ಇರಲಿದೆ. ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆ ಫಲ ಸಿಕ್ಕೇ ‌ಸಿಗುತ್ತದೆ ಎಂದು ಅವರು ನುಡಿದಿದ್ದಾರೆ.

ಕಾಂಗ್ರೆಸ್ ಪಕ್ಷದ ಶಿಸ್ತಿನ ವ್ಯಕ್ತಿ ಡಿ.ಕೆ. ಶಿವಕುಮಾರ್ ಅವರು. ಪಕ್ಷದ ಅಧ್ಯಕ್ಷರಾಗಿ ಬಹಳಷ್ಟು ಶ್ರಮದಿಂದ, ನಿಷ್ಟೆಯಿಂದ ಕೆಲಸ ಮಾಡಿದ್ದಾರೆ. ಅದಕ್ಕೆ ತಕ್ಕ ಫಲ ದೊರೆಯುತ್ತದೆ. ಅವರು ಮುಖ್ಯಮಂತ್ರಿ ಆಗಬೇಕು ಎನ್ನುವ ಕನಸು ನನಗೂ ಇದೆ. ಆದರೆ ಯಾವಾಗ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಅವರು ತಿಳಿಸಿದ್ದಾರೆ.





















































 
 

error: Content is protected !!
Scroll to Top