ಇಸ್ರೇಲ್‌ ದಾಳಿಗೆ ಗಾಜಾದಲ್ಲಿ 94 ನಾಗರಿಕರು ಸಾವು

ನಿರಾಶ್ರಿತರ ಶಿಬಿರದಲ್ಲಿರುವವರ ಮೇಲೆ ದಾಳಿಯ ಆರೋಪ

ಟೆಲ್‌ ಅವೀವ್: ಇರಾನ್‌ ಜೊತೆಗಿನ ಯುದ್ಧಕ್ಕೆ ಇಸ್ರೇಲ್‌ ಸದ್ಯಕ್ಕೆ ವಿರಾಮ ನೀಡಿದ್ದರು. ಗಾಜಾದ ಮೇಲಿನ ದಾಳಿ ಮುಂದುವರಿಸಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸಿದ ವಾಯುದಾಳಿ ಮತ್ತು ಗುಂಡಿನ ದಾಳಿಯಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ‌ 94 ಮಂದಿ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದಕ್ಷಿಣ ಗಾಜಾದಲ್ಲಿ ನಿರ್ವಸಿತ ಜನರು ಮಲಗಿದ್ದ ಟೆಂಟ್ ಶಿಬಿರದ ಮೇಲೆ ರಾತ್ರಿ ಹೊತ್ತು ನಡೆದ ದಾಳಿಗೆ ಜನರು ಬಲಿಯಾಗಿದ್ದಾರೆ. 12 ವರ್ಷದೊಳಗಿನ ಕನಿಷ್ಠ ಆರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 13 ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಗರದ ನಿರ್ವಸಿತ ಜನರಿಗೆ ಆಶ್ರಯ ನೀಡಿದ್ದ ಶಾಲೆಯ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದರು. ನೆರವು ಪಡೆಯುವ ವೇಳೆ ದಿನನಿತ್ಯದ ಗುಂಡಿನ ದಾಳಿಯಲ್ಲಿ ಹೆಚ್ಚಿನ ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪುತ್ತಿದ್ದಾರೆಂದು ವರದಿಗಳು ತಿಳಿಸಿವೆ.





















































 
 

ಗಾಜಾಪಟ್ಟಿಯ ಜನರಿಗೆ ಆಹಾರ ಒದಗಿಸಲು ಇಸ್ರೇಲ್ ಬೆಂಬಲದೊಂದಿಗೆ ಹೊಸದಾಗಿ ರಚಿಸಲಾದ ಅಮೆರಿಕನ್ ಸಂಘಟನೆಯಾದ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್ ಕೆಲಸ ಮಾಡುತ್ತಿದೆ. ಗಾಜಾದ ಸುತ್ತಮುತ್ತಲಿನ ಹಲವಾರು ಸ್ಥಳಗಳಲ್ಲಿ ವಿಶ್ವಸಂಸ್ಥೆಯ ನೆರವು ಸಾಗಿಸುವ ಟ್ರಕ್‌ಗಳಿಗಾಗಿ ಕಾಯುತ್ತಿದ್ದಾಗ ಇನ್ನೂ 40 ಜನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಆಹಾರ ಕೇಂದ್ರಗಳನ್ನು ತಲುಪಲು ಪ್ರಯತ್ನಿಸುತ್ತಿರುವ ಪ್ಯಾಲೆಸ್ತೀನಿಯನ್ನರ ಗುಂಪಿನ ಮೇಲೆ ಇಸ್ರೇಲ್‌ ಪಡೆಗಳು ಗುಂಡಿನ ದಾಳಿ ನಡೆಸುತ್ತಿವೆ. ಗಾಜಾದ ಮಿಲಿಟ ವಲಯಗಳ ಬಳಿ ಜನರು ಗುಂಪುಗೂಡಿದ್ದಾಗ ವಿಶ್ವಸಂಸ್ಥೆಯ ನೆರವಿನ ಸಾಮಗ್ರಿ ಹೊತ್ತ ಟ್ರಕ್‌ಗಳು ಬರುತ್ತಿರುವಂತೆಯೇ ಪಡೆಗಳು ಗುಂಡು ಹಾರಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

error: Content is protected !!
Scroll to Top