ಡಿವೈಡರ್ ಗೆ ಕಾರು ಡಿಕ್ಕಿ : ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಪಾವೂರು ನಿವಾಸಿ ನೌಫಲ್ ಅಪಘಾತದಿಂದ ಮೃತಪಟ್ಟವರು.

ನೌಫಲ್‍ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.





















































 
 
error: Content is protected !!
Scroll to Top