ವಿದ್ಯಾರ್ಥಿನಿ ಅತ್ಯಾಚಾರ : ಆರೋಪಿ ಬಂಧನ

ಪುತ್ತೂರು: ವಿದ್ಯಾರ್ಥಿನಿ ಅತ್ಯಾಚಾರ ಮಾಡಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ. ರಾವ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌ 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀ ಕೃಷ್ಣ ಜೆ ರಾವ್ (21)  ಅವರನ್ನು  ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣಾ ಪೊಲೀಸರು ಶುಕ್ರವಾರ ರಾತ್ರಿ ಮೈಸೂರಿನ ಟಿ ನರಸಿಪುರ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.





















































 
 
error: Content is protected !!
Scroll to Top