ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ

ವಿಪಕ್ಷಕ್ಕೆ ಅಸ್ತ್ರವಾಗಿ ಸಿಕ್ಕಿದ ರಸ್ತೆ ಬೇಕಾ? ಗ್ಯಾರಂಟಿ ಬೇಕಾ ಹೇಳಿಕೆ

ಬೆಂಗಳೂರು : ನಿಮಗೆ ರಸ್ತೆ ಬೇಕಾ ಗ್ಯಾರಂಟಿ ಬೇಕಾ? ರಸ್ತೆ ಬೇಕಾದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಪಕ್ಷಕ್ಕೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತಿತರರು ಈ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ದುಸ್ಥಿತಿ ಬಗ್ಗೆ ಓಪನ್ ಆಗಿ ಹೇಳಿರುವ ಬಸವರಾಜ ರಾಯರಡ್ಡಿಗೆ ನಮ್ಮ ಸರ್ಕಾರ ಬಂದ ನಂತರ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ಕೊಟ್ಟಿದ್ದಾರೆ. ಗ್ಯಾರಂಟಿ ಬೇಕಾ, ರಸ್ತೆ ಬೇಕಾ ಎಂದು ರಾಯರೆಡ್ಡಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಪುಣ್ಯಾತ್ಮ ಅವರೊಬ್ಬರು ಕರೆಕ್ಟ್ ಆಗಿ ಹೇಳಿದ್ದಾರೆ. ಈ ಸರ್ಕಾರ ಹೋಗೋವಾಗ ಜನರ ಕೈಗೆ ಚಿಪ್ಪು ಕೊಟ್ಟೇ ಹೋಗೋದು. ನಮ್ಮ ಸರ್ಕಾರ ಬಂದ ಮೇಲೆ ರಾಯರಡ್ಡಿಗೆ ಪ್ರಶಸ್ತಿ ಕೊಡ್ತೇವೆ. ಸರ್ಕಾರದ ಬಗ್ಗೆ ರಾಯರೆಡ್ಡಿ ಸತ್ಯ ಹೇಳಿದ್ದಾರೆ. ಹಾಗಾಗಿ ಅವರಿಗೆ `ಸತ್ಯವಾನ್ ರಾಯರೆಡ್ಡಿ’ ಪ್ರಶಸ್ತಿ ಕೊಡ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.





















































 
 

ರಾಜ್ಯದ ಕಾಂಗ್ರೆಸ್‌ ಸರ್ಕಾರದ ದುಸ್ಥಿತಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಹೇಳಿಕೆಯೇ ಸಾಕ್ಷಿ ಎಂದು ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂಬ ರಾಯರಡ್ಡಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಗ್ಯಾರಂಟಿ ಕೊಡಿ ಎಂದು ಜನರೇನೂ ಕೇಳಿರಲಿಲ್ಲ. ಅವರಾಗಿಯೇ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಎಂದರು.

ರಾಯರಡ್ಡಿ ಹಲವಾರು ಬಾರಿ ಇಂತಹ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಆ ಹೇಳಿಕೆ ಬಗ್ಗೆ ಟೀಕೆ ಬಂದ ಮೇಲೆ ಮತ್ತೆ ಅದಕ್ಕೆ ಮತ್ತೊಂದು ಸ್ಪಷ್ಟನೆ ಕೊಡುತ್ತಾರೆ. ಅಲ್ಲಿಗೆ ಸರ್ಕಾರದ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನು ಅವರ ಹೇಳಿಕೆಯ ಮೂಲಕ ಅರ್ಥ ಮಾಡಿಕೊಳ್ಳಬಹುದು. ಈ ಸರ್ಕಾರದಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಾರೂ ನಿರೀಕ್ಷೆ ಮಾಡಲು ಆಗುವುದಿಲ್ಲ. ಇವರಿಗೆ ರಾಜ್ಯದ ಅಭಿವೃದ್ಧಿ ಬೇಕಿಲ್ಲ ಎಂದು ಕಿಡಿಕಾರಿದರು.

error: Content is protected !!
Scroll to Top