ದಿಢೀರ್‌ ಪ್ರವಾಹಕ್ಕೆ 82 ಮಂದಿ ಬಲಿ; 41 ಜನರು ನಾಪತ್ತೆ

ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ

ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. ಈ ಪೈಕಿ 28 ಮಕ್ಕಳು ಸೇರಿದ್ದಾರೆ. 41 ಮಂದಿ ಕಾಣೆಯಾಗಿದ್ದಾರೆ. ಕಳೆದ 100 ವರ್ಷಗಳಲ್ಲೇ ಇದು ಅತ್ಯಂತ ಭೀಕರ ಪ್ರವಾಹ ಎನ್ನಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಚ್ಚಿನ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇಲ್ಲಿ ವಿಷಪೂರಿತ ಹಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಲಾಗಿದೆ.





















































 
 

ಮೃತರಿಗೆ ಸಂತಾಪ ಸೂಚಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದು ನಿಜಕ್ಕೂ ಭಯಾನಕ, ದೇವರು ಜನರಿಗೆ ದುಃಖ ಬರಿಸುವ ಶಕ್ತಿ ಕೊಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ ಪ್ರವಾಹ ಪೀಡಿತ ಟೆಕ್ಸಾಸ್‌ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಟೆಕ್ಸಾಸ್‌ನಾದ್ಯಂತ ಸುರಿದ 38 ಸೆಂ.ಮೀ ಮಳೆಯಿಂದಾಗಿ ಹಠಾತ್‌ ಪ್ರವಾಹ ಸಂಭವಿಸಿದೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. 850ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

error: Content is protected !!
Scroll to Top