ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.

ಉತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ರೈ ಆನಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಹಿಂದೂ ಮುಖಂಡರಾದ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಜಯಂತ್ ಕುಂಜೂರುಪಂಜ, ಗಣೇಶ್ ಕಾಮತ್, ಕೇಶವ ಪ್ರಸಾದ್ ಬಿ.ವಿ., ದಾಮೋದರ ಪಾಟಾಳಿ, ಜಿತೇಶ್ ಬಲ್ನಾಡು , ಜಯಂತ್ ಶೆಟ್ಟಿ ಕಂಬಳತ್ತಡ್ಡ, ಮತ್ತತ್ತಿರರು ಉಪಸ್ಥಿತ್ತರಿದ್ದರು.
























