ಯುವತಿಗೆ ಹಲ್ಲೆ ಮಾಡಿ ಆಕೆಯ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

ಬಂಟ್ವಾಳ: ಯುವತಿಗೆ ಹಲ್ಲೆ ಮಾಡಿದ ಯುವಕನೊಬ್ಬ ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಸುಜೀರಿನಲ್ಲಿ ‌ನಡೆದಿದೆ.

ಗ್ಯಾರೇಜಿನಲ್ಲಿ ಕೆಲಸ‌ ಮಾಡುತ್ತಿದ್ದ ಕೊಡ್ಮಣ್ ನಿವಾಸಿ ಸುಧೀರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಹಲ್ಲೆಗೊಳಗಾದ ಯುವತಿ ತುಂಬೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ.

ಈ ಘಟನೆಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































 
 
error: Content is protected !!
Scroll to Top