ಮಾಟ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರ ಜೀವಂತ ದಹನ

ಭೀಕರ ಕೃತ್ಯ ಎಸಗಿದ ಬಳಿಕ ಗ್ರಾಮಕ್ಕೆ ಗ್ರಾಮವೇ ಪಲಾಯನ

ಪಾಟ್ನಾ: ಮಾಟ ಮಂತ್ರ ಮಾಡಿದ ಅನುಮಾನದಲ್ಲಿ ಒಂದೇ ಕುಟುಂಬದ ಐವರು ಸದಸ್ಯರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಪೂರ್ನಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ಪ್ರದೇಶದ ಟೆಟ್ಗಾಮಾ ಎಂಬ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಭೀಕರ ಕೊಲೆ ಸುತ್ತಮುತ್ತಲೂ ಆಘಾತ ಸೃಷ್ಟಿಸಿದೆ. ಕೃತ್ಯ ಎಸಗಿದ ಎಲ್ಲ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ.

ಈ ಭಯಾನಕ ಘಟನೆಯು 4 ದಿನಗಳ ಹಿಂದೆ ಗ್ರಾಮದಲ್ಲಿ ನಡೆದಿದೆ. ಭೂತೋಚ್ಚಾಟನೆ ಮತ್ತು ಚಿಕಿತ್ಸೆಯ ಸಮಯದಲ್ಲಿ ರಾಮ್‌ದೇವ್ ಒರಾನ್ ಎಂಬವರ ಮಗನ ಸಾವಿನ ಬಳಿಕ ಗ್ರಾಮದಲ್ಲಿ ಆಕ್ರೋಶ ಹೆಚ್ಚಾಗಿತ್ತು. ಅವರ ಇನ್ನೊಬ್ಬ ಮಗ ಕೂಡ ಅನಾರೋಗ್ಯಕ್ಕೆ ಒಳಗಾಗಿದ್ದ. ಅವರ ಕುಟುಂಬದಲ್ಲಿ ಮಾಟಗಾರರು ಇರುವುದೇ ಈ ದುರಂತಗಳಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಇದರಿಂದ ಅವರೆಲ್ಲರೂ ಸೇರಿ ಆ ಕುಟುಂಬದ ಐವರನ್ನು ಸುಟ್ಟು ಕೊಂದಿದ್ದಾರೆ.





















































 
 

ಮೃತರನ್ನು ಬಾಬುಲಾಲ್ ಒರಾನ್, ಸೀತಾದೇವಿ, ಮಂಜೀತ್ ಒರಾನ್, ರಾನಿಯಾ ದೇವಿ ಮತ್ತು ತಪ್ಟೋ ಮೊಸಾಮತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಈ ಘಟನೆಯ ನಂತರ ಆ ಊರಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅನೇಕ ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದಾರೆ ಮತ್ತು ಎಫ್‌ಎಸ್‌ಎಲ್ (ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ) ತಂಡದೊಂದಿಗೆ ಶ್ವಾನ ದಳ ತನಿಖೆ ನಡೆಸುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಕುಲ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವರೆಲ್ಲರನ್ನು ಜೀವಂತವಾಗಿ ಸುಡಲು ಗ್ರಾಮಸ್ಥರನ್ನು ನಕುಲ್ ಪ್ರಚೋದಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಮೃತಪಟ್ಟವರ ಕುಟುಂಬದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯೆಂದರೆ ಲಲಿತ್. ಆತ ಈ ಭಯಾನಕ ಘಟನೆಯನ್ನು ವಿವರಿಸಿದ್ದಾರೆ. ತನ್ನ ಇಡೀ ಕುಟುಂಬವನ್ನು ಮೊದಲು ವಾಮಾಚಾರಿಗಳು ಎಂಬ ಆರೋಪದ ಮೇಲೆ ನಿರ್ದಯವಾಗಿ ಥಳಿಸಲಾಯಿತು. ನಂತರ ಥಳಿಸಿ, ಬೆಂಕಿ ಹಚ್ಚಲಾಯಿತು ಎಂದು ಆತ ಹೇಳಿದ್ದಾರೆ. ನಾನು ಹೇಗೋ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡೆ. ಸುಟ್ಟ ನಂತರ ಶವಗಳನ್ನು ನೀರಿಗೆ ಎಸೆಯಲಾಗಿದೆ ಎಂದು ಅವರು ಹೇಳಿದ್ದಾರೆ.

error: Content is protected !!
Scroll to Top