ಐಶ್ವರ್ಯ ಗೌಡ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಡಿ.ಕೆ. ಸುರೇಶ್

ED ಅಧಿಕಾರಿಗಳು ಕೇಳಿದ ಮಾಹಿತಿ ನೀಡಿದ್ದೇನೆ

ಬೆಂಗಳೂರು: ನನಗೆ ಮತ್ತು ಐಶ್ವರ್ಯ ಗೌಡ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಹೇಳಿದ್ದಾರೆ.

ನಗರದಲ್ಲಿರುವ ED ಕಚೇರಿಗೆ ವಿಚಾರಣೆಗೆ ಹಾಜರಾಗಿ ಬಳಿಕ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾದವರು ಕೊಟ್ಟ ಮಾಹಿತಿಯ ಬಗ್ಗೆ ನನಗೆ ತಿಳಿದಿಲ್ಲ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಕರೆದಿದ್ದಕ್ಕೆ ಬಂದು ಹೇಳಿಕೆ ನೀಡಿದ್ದೇನೆ. ನನ್ನ ವೈಯಕ್ತಿಕ ಆಸ್ತಿ, ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದರು. ಅದನ್ನು ನೀಡಿದ್ದೇನೆ ಎಂದಿದ್ದಾರೆ.





















































 
 

ಯಾರು ಈ ವಿಷಯಕ್ಕೆ ನನ್ನನ್ನು ಲಿಂಕ್ ಮಾಡಿದ್ದಾರೋ ಗೊತ್ತಿಲ್ಲ. ನಾನು ಈಗಾಗಲೇ ಅಧಿಕಾರಿಗಳಿಗೆ ನೀಡಿರುವ ದಾಖಲೆಗಳನ್ನು ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ. ಮತ್ತೆ ವಿಚಾರಣೆಗೆ ಕರೆದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಡಿ.ಕೆ. ಸುರೇಶ್ ಅವರು ED ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

error: Content is protected !!
Scroll to Top