ಕುಡುಪು ಗುಂಪು ಹತ್ಯೆ ಪ್ರಕರಣ : ಆಶ್ರಫ್‌ ಕುಟುಂಬಸ್ಥರಿಗೆ ಪರಿಹಾರ ವಿತರಣೆ

ಸಚಿವ ಜಮೀರ್‌ 10 ಲ.ರೂ. ; ಸ್ಪೀಕರ್‌ ಯು.ಟಿ.ಖಾದರ್‌ 5 ಲ.ರೂ. ವೈಯಕ್ತಿಕ ನೆಲೆಯಲ್ಲಿ ಕೊಡುಗೆ

ಮಂಗಳೂರು: ನಗರದ ಕುಡುಪು ಸಮೀಪ ಮೈದಾನದಲ್ಲಿ ನಡೆದಿದ್ದ ಗುಂಪು ಹತ್ಯೆಯಲ್ಲಿ ಸಾವನ್ನಪ್ಪಿದ ಕೇರಳದ ವಯನಾಡಿನ ಅಶ್ರಫ್ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಧನ ವಿತರಿಸಿದೆ. ನಿನ್ನೆ ರಾಜ್ಯ ಕಾಂಗ್ರೆಸ್ ನಿಯೋಗ ಆಶ್ರಫ್‌ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದು, ಈ ಸಂದರ್ಭದಲ್ಲಿ ಪರಿಹಾರದ ಚೆಕ್‌ ಹಸ್ತಾಂತರಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಬೆಂಗಳೂರು ನಿವಾಸದಲ್ಲಿ ಸಚಿವ ಜಮೀರ್ ಅಹ್ಮದ್, ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಕಾಂಗ್ರೆಸ್ ಮುಖಂಡ ಜಿ.ಎ.ಬಾವಾ ಚರ್ಚೆ ನಡೆಸಿ ಪರಿಹಾರ ವಿತರಿಸಿದ್ದಾರೆ.





















































 
 

ಚರ್ಚೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಲು ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರನ್ನು ನೇಮಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಗುಂಪು ಹತ್ಯಾ ಕಾಯ್ದೆ ಪ್ರಕಾರ ಹತ್ಯೆಯಾದ ಅಶ್ರಫ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಒದಗಿಸುವ ಕುರಿತು ಚರ್ಚೆ ನಡೆಸಲಾಗಿದೆ.

ಇದಲ್ಲದೆ ಸಚಿವ ಜಮೀರ್ ಅಹ್ಮದ್ ಖಾನ್ 10 ಲಕ್ಷ ರೂ. ಹಾಗೂ ಯು.ಟಿ.ಖಾದರ್ 5 ಲಕ್ಷ ರೂ. ಪರಿಹಾರದ ಮೊತ್ತವನ್ನು ತಮ್ಮ ವೈಯುಕ್ತಿಕ ನೆಲೆಯಲ್ಲಿ ಅಶ್ರಫ್ ಕುಟುಂಬಸ್ಥರಿಗೆ ವಿತರಿಸಿದರು.

error: Content is protected !!
Scroll to Top