ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ನಡೆದ ಎನ್‌ಕೌಂಟರ್
ಪಾಟ್ನಾ: ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದ ಓರ್ವ ಆರೋಪಿ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಗೋಪಾಲ್ ಹತ್ಯೆಗೆ ಸಂಬಂಧಿಸಿದ ಹಾಗೆ ಆರೋಪಿಗಳನ್ನು ಬಂಧಿಸಲು ಹೋಗಿದ್ದು, ಈ ಸಂದರ್ಭದಲ್ಲಿ ಆರೋಪಿಯೊಬ್ಬ ಪೊಲೀಸರ ಮೇಲೆಯೇ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ತಕ್ಷಣವೇ ಪೊಲೀಸರು ಪ್ರತಿದಾಳಿ ನಡೆಸಿದ್ದು, ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡ ಆರೋಪಿ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಮೃತ ಆರೋಪಿಯನ್ನು ವಿಕಾಸ್ ಯಾನೆ ರಾಜ ಎಂದು ಗುರುತಿಸಲಾಗಿದೆ. ಈ ಹತ್ಯೆಯ ಪ್ರಮುಖ ಆರೋಪಿ ಉಮೇಶ್ ಈಗಾಗಲೇ ಪೊಲೀಸರ ವಶದಲ್ಲಿದ್ದಾನೆ.
ಮೃತಪಟ್ಟ ಆರೋಪಿ ರಾಜ ಗೋಪಾಲ್ ಹತ್ಯೆಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಎಂಬ ಆರೋಪ ಹೊತ್ತಿದ್ದಾನೆ.
























