ಹಗರಣಗಳ ಸುಳಿಯಲ್ಲಿದೆ ‌ರಾಜ್ಯ ಕಾಂಗ್ರೆಸ್ ಸರ್ಕಾರ: ಸಂಸದ ಯದುವೀರ್ | ಕರ್ನಾಟಕದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿ | ಜನಪರ ಕಾಳಜಿ ಇರುವ ಬಿಜೆಪಿಯನ್ನು ಅಧಿಕಾರಕ್ಕೇರುವಂತೆ ಮಾಡಬೇಕು

ಸೋಮವಾರಪೇಟೆ: ಕಾಂಗ್ರೆಸ್‌ ಸರ್ಕಾರ ಹಗರಣಗಳ ಸುಳಿಯಲ್ಲಿದ್ದು, ಇಂತಹ ಸರ್ಕಾರದಿಂದ ಅಭಿವೃದ್ಧಿ ಅಸಾಧ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಕೊಡವ‌ ಸಮಾಜ ಆಯೇಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ? ಕೇವಲ ಹಗರಣಗಳ ಸುಳಿಯಲ್ಲಿ ಸಿಲುಕುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚಿನವು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು ಎಂದು ಅವರು ತಿಳಿಸಿದ್ದಾರೆ.

ಕೊಡಗಿನಲ್ಲಿ ಬಿಜೆಪಿ ಎರಡು ಶಾಸಕರನ್ನು ಕಳೆದುಕೊಂಡಿದೆ. ಆದರೆ ಆಡಳಿತ ಪಕ್ಷದ ಶಾಸಕರುಗಳಿಗೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗಿನ ರಸ್ತೆಗಳು ಸುವ್ಯವಸ್ಥಿತವಾಗಿತ್ತು. ಆದರೆ ಈಗ ಅವುಗಳ ಸ್ಥಿತಿ ಏನಾಗಿದೆ? ರಸ್ತೆಗಳ ನಿರ್ವಹಣೆ ರಾಜ್ಯ ಸರ್ಕಾರದ ಹೊಣೆ ಎಂದು ಅವರು ಕಾಂಗ್ರೆಸ್ ಸರ್ಕಾರವನ್ನು ಕುಟುಕಿದ್ದಾರೆ.





















































 
 

ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಿ, ಪ್ರತಿಭಟನೆಯ ಮೂಲಕ ಚುರುಕ್ ಮುಟ್ಟಿಸಬೇಕಾದವರು ನಾವು. ಇಂತಹ ಸರ್ಕಾರವನ್ನು ಅಧಿಕಾರದಿಂದ ಇಳಿಸಿ ಜನಪರ ಕಾಳಜಿ ಹೊಂದಿರುವ ಬಿಜೆಪಿ ಸರ್ಕಾರ ರಚಿಸುವಂತೆ ಮಾಡಬೇಕಾದ ಕರ್ತವ್ಯ ನಮ್ಮದು ಎಂದಿದ್ದಾರೆ.

error: Content is protected !!
Scroll to Top