ಪ್ರಧಾನಿ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ಪ್ರದಾನ

ಬ್ರೆಜಿಲ್: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪುರಸ್ಕಾರ ‘ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರದಾನಿಸಿ ಗೌರವಿಸಲಾಗಿದೆ.

ಬ್ರೆಜಿಲ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ವಿಶ್ವ ವೇದಿಕೆಯಲ್ಲಿ ಉಭಯ ರಾಷ್ಟ್ರಗಳ ಸಹಕಾರ ಸಂಬಂಧವನ್ನು ಮತ್ತಷ್ಟು ಭದ್ರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಗಮನಾರ್ಹ ಕೊಡುಗೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಈ ಪುರಸ್ಕಾರವನ್ನು ಅವರಿಗೆ ನೀಡಿ ಗೌರವಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ ಅವರು, ಬ್ರೆಜಿಲ್‌ನ ಅಧ್ಯಕ್ಷರಿಂದ ಪುರಸ್ಕಾರ ಪಡೆದಿರುವುದು ನನಗೆ ಮಾತ್ರವಲ್ಲ ಭಾರತದ 140 ಕೋಟಿ ಜನರಿಗೆ ಹೆಮ್ಮೆಯ ಕ್ಷಣವಾಗಿದೆ. ಬ್ರೆಜಿಲ್ ದೇಶದ ಅಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.





















































 
 
error: Content is protected !!
Scroll to Top