ಭದ್ರತಾ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ

ಉಪ್ಪಿನಂಗಡಿ: ಸಹಕಾರಿ ಸಂಸ್ಥೆಯ ಭದ್ರತಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಭದ್ರತಾ ಸಿಬ್ಬಂದಿ ಸುರೇಶ್ (30) ಆತ್ಮಹತ್ಯೆ ಮಾಡಿಕೊಂಡವರು.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆ ನಿವಾಸಿ  ದಿ. ನೀಲಯ್ಯ ಗೌಡ ಎಂಬವರ ಪುತ್ರರಾಗಿರುವ ಸುರೇಶ್  ಕರ್ತವ್ಯಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಎಸಗಿದ್ದಾರೆ ಎಂದು ದೂರಲಾಗಿದೆ. ಈ ಕುರಿತು  ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.





















































 
 
error: Content is protected !!
Scroll to Top