ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟ್ ಹಂಚಿಕೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ನೊಟೀಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಪತ್ನಿಗೆ ಈವರೆಗೆ ವಿಚಾರಣೆಗೆ ನೊಟೀಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ.
ಹಾಗೆಯೇ ತನಿಖೆಗೆ ಸಂಬಂಧಿಸಿದ ಹಾಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯೂ ನಡೆಯಿತು. ಜೊತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈ ವರೆಗೆ ನೊಟೀಸ್ ಜಾರಿಯಾಗದ ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಸೆ. 4 ಕ್ಕೆ ಮುಂದೂಡಿದೆ.
























