ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಧೋರಣೆ ಬೇಡ: ಡಾ. ಹೆಚ್.ಸಿ. ಮಹದೇವಪ್ಪ

ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ದೃಷ್ಟಿಯಿಂದ ಜಾರಿಗೆ ತರಲಾಗಿದ್ದು, ಇದನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಚಿವ ಡಾ. ಹೆಚ್. ಸಿ. ಮಹದೇವಪ್ಪ ನೀಡಿದ್ದಾರೆ.

ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದಿದೆ‌. ಆದರೂ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ಸಾಧ್ಯವಾಗಿಲ್ಲ. ಅವರ ಕಲ್ಯಾಣ ಯೋಜನೆಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ವಿಷಯದಲ್ಲಿ ನಿರಾಸಕ್ತಿ ತೋರುವ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ತಿಳಿಸಿದ್ದಾರೆ.





















































 
 

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪರಿಶಿಷ್ಟ ಸಮುದಾಯಗಳ ಮಹಿಳೆಯರಿಗೆ ಹೇಗೆ ಅನುಕೂಲವಾಗಿದೆ ಎನ್ನುವುದರ ಬಗ್ಗೆ ನಿಖರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆಜ್ಞಾಪಿಸಿದ್ದಾರೆ.

error: Content is protected !!
Scroll to Top