ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬಡ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳ ಎಲ್‌ಕೆಜಿಯಿಂದ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್‌ ವ್ಯವಸ್ಥೆಯನ್ನು ಸರ್ಕಾರ ನೀಡಲಿದೆ ಎಂದು ಶಿವಕುಮಾರ್‌ ಬರೆದುಕೊಂಡಿದ್ದಾರೆ.





















































 
 

ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ. ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆಯೂ ಇದಾಗಿದೆ ಎಂದು ಎಕ್ಸ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ.

error: Content is protected !!
Scroll to Top