ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್‌.ಎಂ.ರೇವಣ್ಣ

ಗ್ಯಾರಂಟಿ ಕೊಡುವುದಕ್ಕೆ ತೊಡಕುಗಳಿವೆ ಎಂದು ಒಪ್ಪಿಕೊಂಡ ಸಮಿತಿ ಅಧ್ಯಕ್ಷ

ಬೆಂಗಳೂರು: ಫಲಾನುಭವಿಗಳಿಗೆ ಗೃಹಲಕ್ಷ್ಮಿಹಣ ಪ್ರತಿ ತಿಂಗಳು ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ ರೇವಣ್ಣ ಹೇಳಿದ್ದಾರೆ. ಪ್ರತಿ ತಿಂಗಳು ಹಣ ಕೊಡುವುದಕ್ಕೆ ಕೆಲವು ತೊಡಕುಗಳಿವೆ. ಸದ್ಯ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1.20 ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆಹರಿಸುತ್ತೇವೆ ಎಂದಿದ್ದಾರೆ.





















































 
 

ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡುವುದಕ್ಕೆ ಕೆಲವು ತೊಡಕುಗಳಿವೆ. ಹೀಗಾಗಿ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

error: Content is protected !!
Scroll to Top