ಪಾಟ್ನಾ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ತಪ್ಪಿತಸ್ಥರಿಗೆ ಶೀಘ್ರವೇ ಕಠಿಣ ಶಿಕ್ಷೆ ನೀಡುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಚಿರಾಗ್ ಪಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿದ್ದು ಈ ಕಾರಣದಿಂದಲೇ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸೈಬರ್ ಪೊಲೀಸ್ ಡಿಸಿಪಿ ನಿತೇಶ್ ಚಂದ್ರ ಧರಿಯಾ, ಚಿರಾಗ್ ಪಸ್ವಾನ್ ಅವರಿಗೆ ಜುಲೈ 11 ರಂದು ರಾತ್ರಿ 9 ಗಂಟೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದ್ದು ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
























