ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದಿಂದ ಏಮಾಜೆ ಶಾಲೆಯಲ್ಲಿ ಪರಿಸರ  ಜಾಗೃತಿ ದಿನ ಆಚರಣೆ

ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ವತಿಯಿಂದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ,  ಶ್ರೀಕ್ಷೇತ್ರದ ವತಿಯಿಂದ  ನಡೆಸುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ  ಉಪಾಧ್ಯಕ್ಷ  ಹರೀಶ್  ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಪೋಷಿಸುವ ಜವಾಬ್ದಾರಿ ಎಲ್ಲರಿಗೂ ಇದೆ ಎಂದರು.





















































 
 

ಮಾಣಿ ಶೌರ್ಯ ಘಟಕದ  ಪ್ರತಿನಿಧಿ ಸತೀಶ್, ಮಕ್ಕಳ  ಪೋಷಕರು ಸಹಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ತ್ರಿವೇಣಿ ಸ್ವಾಗತಿಸಿ, ಸಹ ಶಿಕ್ಷಕಿ ದೀಕ್ಷಾ ವಂದಿಸಿದರು. ಸಹ ಶಿಕ್ಷಕಿ ಅಕ್ಷತಾ ನಿರೂಪಿಸಿದರು. ಸಹ ಶಿಕ್ಷಕಿ ಐಸಮ್ಮ, ಸೇವಾ ಪ್ರತಿನಿಧಿ ಪುಷ್ಪಲತಾ ಸಹಕರಿಸಿದರು.

error: Content is protected !!
Scroll to Top