ಗ್ಯಾಸ್ ಸೋರಿಕೆಯಿಂದ ಬೆಂಕಿ ಆವರಿಸಿ ಅಡುಗೆ ಮನೆಗೆ ಹಾನಿ

ಬೆಳ್ತಂಗಡಿ: ಗ್ಯಾಸ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಅಡುಗೆ ಮನೆ ಸಂಪೂರ್ಣ ಹೊತ್ತಿದ ಘಟನೆ ಧರ್ಮಸ್ಥಳ ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೀತಾ ದಾಮೋದರ ಆಚಾರ್ಯ ಅವರ ಮನೆಯಲ್ಲಿ ಇಂದು ಮುಂಜಾನೆ ನಡೆದಿದೆ,

ಭಾನುವಾರ ಬೆಳಗ್ಗೆ ಉಪಹಾರ ತಯಾರಿಸಲು ಗ್ಯಾಸ್ ಉರಿಸಿದಾಗ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ತುಂಬಾ ಜನರಿದ್ದರು. ಮನೆಯವರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗಿಲ್ಲ.

ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.





















































 
 
error: Content is protected !!
Scroll to Top