ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರಿನಲ್ಲಿ ನಡೆದಿದೆ

ಬೆಳ್ತಂಗಡಿ ತಾಲೂಕಿನ ಕೊಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎರಡು ವರ್ಷದ ಹಿಂದೆ ಕೊಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಗೆ ಆರೋಗ್ಯ ಸಮಸ್ಯೆಗಳಿತ್ತು ಎಂದು ತಿಳಿದುಬಂದಿದೆ.





















































 
 

ರಮ್ಯ ಅವರು ತಾಯಿ ಮನೆಗೆ ಬಂದಿದ್ದಿ. ಆರೋಗ್ಯ ಸಮಸ್ಯೆ ಬಗ್ಗೆ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ, ಅನುಮಾನಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಕಂದಾಯ ಇಲಾಖೆಯ ಪುತೀಷ್ ಮತ್ತು ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top