ಭಾರಿ ಪ್ರಮಾಣದ ನಿಷೇಧಿತ ಡ್ರಗ್ಸ್ ವಶ
ಬೆಂಗಳೂರು: ಮಾದಕವಸ್ತು ಸಾಗಾಟ ಮಾಡಿದ ಆರೋಪದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ್ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆತನ ಬಳಿ ನಿಷೇಧಿತ 120 ಬಾಟಲಿ ಕೊಡೆನೈನ್ ಸಿರಪ್ ಇತ್ತು ಎಂಬ ಆರೋಪ ಕೇಳಿ ಬಂದಿದೆ.
ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಅಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಿಂಗರಾಜ್ ಕಣ್ಣಿ ಮೊದಲು ಬಿಜೆಪಿಯಲ್ಲಿ ಇದ್ದರ. 2023ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದ.
























