ಆ.3 : ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ಪುತ್ತೂರು ತಾಲೂಕಿನ ಸಮಾಜ ಬಾಂಧವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಂಘದ ವಾರ್ಷಿಕ ಮಹಾಸಭೆ ಆ.3ರಂದು ನಡೆಯಲಿದ್ದು, 2024-25ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜಬಾಂಧವ ಪುತ್ತೂರು ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ನಡೆಯಲಿದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿ ಮತ್ತು ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಜು.31 ರ ಒಳಗಾಗಿ ವಿವರ ನೀಡಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ: 9448328280, 9448311565 ಸಂಪರ್ಕಿಸುವಂತೆ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.





















































 
 
error: Content is protected !!
Scroll to Top